ಮೈಸೂರು ಜನವರಿ 26 :- 77 ನೇ ಗಣರಾಜ್ಯೋತವದ ಆಚರಣೆಯನ್ನು ನಗರದ ಪಂಜಿನ ಕವಾಯತು ಮೈದಾನದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವರಿಸಿ ಚಾಲನೆ ನೀಡಿದರು.

ಮಾನ್ಯ ಸಚಿವರು ಪೆರೇಡ್ ತುಕಡಿಗಳ ಪರಿವೀಕ್ಷಣೆ ನಡೆಸಿದರು. ನಂತರ ದ್ವಜ ವಂದನೆ ಸ್ವೀಕರಿಸಿದರು.

26 ತುಕಡಿಗಳು ಗಣರಾಜ್ಯೋತವದ ಪೆರೇಡ್ ನಲ್ಲಿ ಭಾಗವಹಿಸಿ ಪಥ ಸಂಚಲನ ನಡೆಸಿದವು. ವಿಶೇಷವಾಗಿ ಈ ಬಾರಿ ಮೈಸೂರಿಗೆ ಸ್ವಚ್ಛ ನಗರಿ ಎಂದು ಹೆಸರು ಬರಲು ಕಾರಣೀಭೂತರಾದ ಪೌರ ಕಾರ್ಮಿಕರು ಪಥ ಸಂಚಲನ ದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಮಾನ್ಯ ಸಚಿವರು 77 ನೇ ಗಣರಾಜ್ಯೋತ್ಸವದ ಸಂದೇಶವನ್ನು ನೀಡಿದರು.
ಟೆರಿಶಿಯನ್ ಕಾನ್ವೆಂಟ್ ಬಾಲಕಿಯರ ಪ್ರೌಢ ಶಾಲೆಯ ಮಕ್ಕಳಿಂದ ನಮೋ ನಮೋ ಭಾರತಾಂಬೆ ಹಾಡಿಗೆ ನೃತ್ಯ ಮಾಡಿದರು. ಮಹಾ ಬೋಧಿ ನಿರ್ಭರ್ ಭಾರತ ನೃತ್ಯ ಪ್ರದರ್ಶನ ನೀಡಿದರು. ಡಿ ಎ ವಿ ಪಬ್ಲಿಕ್ ಶಾಲೆಯ ಮಕ್ಕಳಿಂದ ವಿವಿಧತೆಯಲ್ಲಿ ಏಕತೆ ದೇಶ ಭಕ್ತಿ ಗೀತೆಗೆ ನೃತ್ಯ ಪ್ರದರ್ಶನ ನೀಡಿದರು. ಕ್ಯಾಪಿಟಲ್ ಪಬ್ಲಿಕ್ ಶಾಲೆಯ ಮಕ್ಕಳಿಂದ ವಂದೇ ಮಾತರಂ ದೇಶ ಭಕ್ತಿ ಗೀತೆಗೆ ನೃತ್ಯ ಪ್ರದರ್ಶನ ಮಾಡಿದರು.
ಕಾರ್ಯಕ್ರಮದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನೀಲ್ ಬೋಸ್, ನರಸಿಂಹ ರಾಜ ಶಾಲೆ ಮ ಕ್ಕಳಿಂದ ಆತ್ಮವಿಧಾನಸಭಾ ಕ್ಷೇತ್ರದ ಶಾಹಕರಾದ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಸಿ ಎನ್ ಮಂಜೇಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಪ್ರಾದೇಶಿಕ ಆಯುಕ್ತರಾದ ನಿತೇಶ್ ಪಾಟೀಲ್, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಲ್ಲಿಕಾರ್ಜುನ್ ಬಾಲದಂಡಿ, ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ಅವರು ಸೇರದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




