HOMENews

ಮೈಸೂರು ಬಳಿ ಪೆಟ್ರೋಲ್ ಬಂಕ್ ಗೆ ನುಗ್ಗಿ ದರೋಡೆ

ಬಿಳಿಕೆರೆಯಲ್ಲಿ ದಾಳಿ: ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಹಣ ಕಸಿದು ಪರಾರಿ

ಮೈಸೂರು: ರಾತ್ರಿ ಸಮಯದ ಶಾಂತಿಯನ್ನು ಚೀರುತ್ತ ಬಂದ ಐವರ ಗುಂಪೊಂದು ಪೆಟ್ರೋಲ್ ಬಂಕ್ಗೆ ನುಗ್ಗಿ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಹಣ ದೋಚಿಕೊಂಡು ಪರಾರಿಯಾದ ಘಟನೆ ಜಿಲ್ಲೆಯಲ್ಲಿ ಆತಂಕ ಹುಟ್ಟಿಸಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಪ್ರದೇಶದಲ್ಲಿರುವ ಸ್ವಾಮಿ ಸರ್ವಿಸ್ ಸ್ಟೇಷನ್ನಲ್ಲಿ ಈ ದರೋಡೆ ನಡೆದಿರುವುದು ಬೆಳಕಿಗೆ ಬಂದಿದೆ.

ಪೊಲೀಸ್ ಮಾಹಿತಿಯ ಪ್ರಕಾರ, ಫೆಬ್ರವರಿ 12ರ ರಾತ್ರಿ ಸುಮಾರು 10:30ರ ವೇಳೆಗೆ ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಐವರು ಆರೋಪಿಗಳು ಬಂಕ್ಗೆ ಬಂದಿದ್ದಾರೆ. ಸಾಮಾನ್ಯ ಗ್ರಾಹಕರಂತೆ ವರ್ತಿಸಿದ ಅವರು ಮೊದಲು ವಾಹನಕ್ಕೆ ಪೆಟ್ರೋಲ್ ಹಾಕಿಸಿಕೊಂಡಿದ್ದಾರೆ. ಬಳಿಕ ಕ್ಷಣಾರ್ಧದಲ್ಲೇ ಪರಿಸ್ಥಿತಿ ಬದಲಾಗಿದ್ದು, ಮಾರಕಾಸ್ತ್ರಗಳನ್ನು ಹಿಡಿದು ಕಚೇರಿ ಭಾಗದೊಳಗೆ ನುಗ್ಗಿದ್ದಾರೆ ಎನ್ನಲಾಗಿದೆ. ಅಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಯನ್ನು ಬೆದರಿಸಿ, ಹಲ್ಲೆ ನಡೆಸಿ ಹಣವನ್ನು ಕಸಿದುಕೊಂಡಿದ್ದಾರೆ.

ಇದನ್ನೂ ಓದಿ:- ಮೈಸೂರಿನಲ್ಲಿ ಶಾಂತಿ ಮಂದಿರದಲ್ಲೇ ಕ್ರೌರ್ಯ: ನಮಾಜ್ ಮಾಡುವ ವೇಳೆ ಬಾಲಕನ ಮೇಲೆ ಹಲ್ಲೆ

ಈ ದರೋಡೆ ವೇಳೆ ಸುಮಾರು ₹15,300 ನಗದು ಕಸಿದುಕೊಂಡು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಸಿಬ್ಬಂದಿಗೆ ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ತೀವ್ರತೆ ಹಾಗೂ ದಾಳಿಯ ಧೈರ್ಯ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಘಟನೆ ನಡೆದ ಸಂಪೂರ್ಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರಲ್ಲಿ ಆರೋಪಿಗಳು ಕಾರಿನಲ್ಲಿ ಬಂದು ಪೆಟ್ರೋಲ್ ಹಾಕಿಸಿಕೊಂಡ ನಂತರ ಕಚೇರಿಯೊಳಗೆ ನುಗ್ಗಿ ಹಲ್ಲೆ ನಡೆಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಈ ದೃಶ್ಯಗಳು ತನಿಖೆಗೆ ಪ್ರಮುಖ ಸಾಕ್ಷಿಯಾಗಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ದರೋಡೆ ಕುರಿತು ದೂರು ದಾಖಲಿಸಿಕೊಂಡ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಗುರುತು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ನಂಬರ್ ಪ್ಲೇಟ್ ಇಲ್ಲದ ಕಾರನ್ನು ಬಳಸಿರುವುದು ಯೋಜಿತ ಕೃತ್ಯವಾಗಿರಬಹುದು ಎಂಬ ಅನುಮಾನವೂ ವ್ಯಕ್ತವಾಗಿದೆ. ಆರೋಪಿಗಳು ಸುತ್ತಮುತ್ತಲಿನ ಪ್ರದೇಶದವರೇ ಅಥವಾ ಹೊರಗಿನಿಂದ ಬಂದವರೇ ಎಂಬ ಅಂಶವನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ:- ಮೈಸೂರಿನಲ್ಲಿ ಶಾಂತಿ ಮಂದಿರದಲ್ಲೇ ಕ್ರೌರ್ಯ: ನಮಾಜ್ ಮಾಡುವ ವೇಳೆ ಬಾಲಕನ ಮೇಲೆ ಹಲ್ಲೆ

ಇಲ್ಲಿನ ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ಈಂತಹ  ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ರಾತ್ರಿ ವೇಳೆಯಲ್ಲಿ ಇಂತಹ ದರೋಡೆಗಳು ನಡೆಯುತ್ತಿರುವುದು ಭದ್ರತಾ ಕ್ರಮಗಳನ್ನು ಬಲಪಡಿಸುವ ಅಗತ್ಯವಿದೆ ಎಂಬ ಚರ್ಚೆಗೆ ಕಾರಣವಾಗಿದೆ. ಪೆಟ್ರೋಲ್ ಬಂಕ್ಗಳಲ್ಲಿ ಹೆಚ್ಚುವರಿ ಭದ್ರತಾ ವ್ಯವಸ್ಥೆ, ಸಿಬ್ಬಂದಿಗೆ ತುರ್ತು ಸಹಾಯ ವ್ಯವಸ್ಥೆ ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಸಾಮಾನ್ಯ ಸಾರ್ವಜನಿಕ ಸೇವಾ ಕೇಂದ್ರವಾಗಿರುವ ಪೆಟ್ರೋಲ್ ಬಂಕ್ಗಳಿಗೂ  ಗ್ಯಾಂಗ್ ನುಗ್ಗಿ ದರೋಡೆ ನಡೆಸಿರುವ ಘಟನೆ ಮೈಸೂರು ಭಾಗದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆರೋಪಿಗಳ ಬಂಧನವಾಗುವವರೆಗೂ ಪ್ರಕರಣದತ್ತ ಸಾರ್ವಜನಿಕರ ಗಮನ ನೆಟ್ಟಿದೆ. ಪೊಲೀಸರು ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆಹಚ್ಚುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪೊಲೀಸರುಶೀಘ್ರದಲ್ಲೇ ಆರೋಪಿಗಳನ್ನು ಪತ್ತೆಹಚ್ಚುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಡಿವೈಡರ್ ಹಾರಿ KSRTC ಬಸ್ಸಿಗೆ ನೆಲಮಂಗಲ ಬಳಿ ಗುದ್ದಿದ ಕಾರು: ಐದು ಜನರ ಸಾ*

Leave a Response