
ಮುಂಬೈ: ಭಾರತದ ಕ್ರಿಕೆಟ್ ಲೋಕದಲ್ಲಿ ಅಪಾರ ಗೌರವ ಪಡೆದಿರುವ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡ್ಕೋಲರ್ ಅವರ ಪುತ್ರ ಅರ್ಜುನ್ ತೆಂಡ್ಕೊಲರ್ ತಮ್ಮ ಜೀವನದ ಹೊಸ ಜೀವನದ ಅಧ್ಯಾಯಕ್ಕೆ ಕಾಲಿಟ್ಟಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಕ್ರೀಡಾ ವಲಯದಲ್ಲಿ ಆಗಾಗ್ಗೆ ಚರ್ಚೆಗೆ ಕೇಳಿ ಬರಿತ್ತಿದ್ದವು . ಸಚಿನ್ ತೆಂಡ್ಕೊಲರ್ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಂದೋಕ್ ಅವರೊಂದಿಗೆ ವಿವಾಹವಾಗಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದ್ದು, ದಕ್ಷಿಣ ಮುಂಬೈನಲ್ಲಿ ಕುಟುಂಬ ಸದಸ್ಯರು, ಆಪ್ತ ಸ್ನೇಹಿತರು ಹಾಗೂ ಕೆಲ ಗಣ್ಯರ ಸಮ್ಮುಖದಲ್ಲಿ ಖಾಸಗಿ ಸಮಾರಂಭದಲ್ಲಿ ಈ ಮದುವೆ ನೆರವೇರಿದಂತೆ ಹೇಳಲಾಗುತ್ತಿದೆ.

ಮುಂಬೈ ನಗರದ ಪ್ರಮುಖ ಐಷಾರಾಮಿ ಹೋಟೆಲ್‌ಗಳಲ್ಲಿ ಒಂದರಲ್ಲಿ ಈ ವಿವಾಹ ಸಮಾರಂಭ ಆಯೋಜಿಸಲಾಗಿತ್ತು ಎಂದು ವರದಿಗಳು ಸೂಚಿಸುತ್ತಿವೆ. ಮದುವೆ ಸಮಾರಂಭವು ಸಂಪ್ರದಾಯಬದ್ಧ ಹಿಂದು ಆಚರಣೆಗಳ ಪ್ರಕಾರ ನಡೆದಿದ್ದು, ಕುಟುಂಬ ಸದಸ್ಯರು ಹಾಗೂ ಆತ್ಮೀಯರ ಸಮ್ಮುಖದಲ್ಲಿ ನವಜೋಡಿ ಏಳು ಸುತ್ತು ಸುತ್ತುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಎನ್ನಲಾಗುತ್ತಿದೆ. ಮದುವೆ ಸಮಾರಂಭ ಸರಳವಾದರೂ ಅದ್ಧೂರಿಯಾಗಿ ನಡೆದಿದ್ದು, ಉದ್ಯಮ ವಲಯದ ಗಣ್ಯರು, ಕ್ರಿಕೆಟ್ ಲೋಕದ ಕೆಲವು ಪ್ರಮುಖ ವ್ಯಕ್ತಿಗಳು ಮತ್ತು ಸಿನಿರಂಗದ ಕೆಲ ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನವವಿವಾಹಿತರಿಗೆ ಶುಭಾಶಯ ಕೋರಿದ್ದಾರೆ ಎಂದು ತಿಳಿದುಬಂದಿದೆ.
ಈ ಜೋಡಿ ಕಳೆದ ವರ್ಷ ಆಗಸ್ಟ್ 25ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು ಎನ್ನುವ ಮಾಹಿತಿ ಕೂಡ ಹರಿದಾಡಿತ್ತು. ಆ ಸಂದರ್ಭದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿತ್ತು ಎಂದು ಹೇಳಲಾಗುತ್ತಿದೆ. ನಿಶ್ಚಿತಾರ್ಥದ ನಂತರ ಇವರಿಬ್ಬರೂ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಂಡಿರಲಿಲ್ಲ. ಆದ್ದರಿಂದ ಈ ಮದುವೆಯ ಸುದ್ದಿ ಹೊರಬಂದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಮತ್ತು ನೆಟ್ಟಿಗರು ದೊಡ್ಡ ಮಟ್ಟದಲ್ಲಿ ಚರ್ಚೆ ಆರಂಭಿಸಿದ್ದಾರೆ.
ಮದುವೆ ಸಮಾರಂಭದಲ್ಲಿ ಕ್ರಿಕೆಟ್ ವಲಯದ ಅನೇಕ ಗಣ್ಯರು ಭಾಗವಹಿಸಿದ್ದರೆಂದು ಹೇಳಲಾಗುತ್ತಿದೆ. ಭಾರತೀಯ ಕ್ರಿಕೆಟ್‌ನ ದಿಗ್ಗಜ ಆರಂಭಿಕ ಆಟಗಾರ ಸುನೀಲ್ ಗಾವಸ್ಕರ್, ಭಾರತದ ಮಾಜಿ ನಾಯಕ ಎಂ.ಎಸ್ ದೋನಿ, ವಿಶ್ವಕಪ್ ಹೀರೋ ಯುವರಾಜ್ ಸಿಂಗ್, ವೇಗದ ಬೌಲರ್ ಜಾಹಿರ್ ಖಾನ್, ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಹಾಗೂ ಮಾಜಿ ಆಲ್‌ರೌಂಡರ್ ಇರ್ಪಾನ್ ಪಠಾಣ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೆಂದು ವರದಿಗಳು ತಿಳಿಸಿವೆ.

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎ>ಎಸ್ ದೋನಿ ತಮ್ಮ ಪತ್ನಿ ಸಾಕ್ಷಿ ಧೋನಿ ಅವರೊಂದಿಗೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದೇ ವೇಳೆ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ Gautam Gambhir ಕೂಡ ತಮ್ಮ ಪತ್ನಿ ನತಾಶಾ ಜೈನ್ ಅವರೊಂದಿಗೆ ಈ ಕಾರ್ಯಕ್ರಮದಲ್ಲಿ ಹಾಜರಿದ್ದರು ಎನ್ನಲಾಗಿದೆ.
ಇದರ ಜೊತೆಗೆ ಭಾರತೀಯ ಕ್ರಿಕೆಟ್‌ನ ಮಾಜಿ ಕೋಚ್ ರಾಹುಲ್ ದ್ರಾವಿಡ್ ಮಾಜಿ ಕೋಚ್ ರವಿ ಶಾಸ್ತ್ರಿ ಸೇರಿದಂತೆ ಹಲವು ಪ್ರಮುಖ ವ್ಯಕ್ತಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರೆಂದು ತಿಳಿದುಬಂದಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಜಯ್ ಷಾ ಮತ್ತು ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಆಯ್ಕೆದಾರ ಅಜೀಲ್ ಅಗರ್ಕರ್ ಕೂಡ ತಮ್ಮ ಕುಟುಂಬ ಸದಸ್ಯರೊಂದಿಗೆ ಈ ಮದುವೆಯಲ್ಲಿ ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದ್ದಾರೆ ಎನ್ನಲಾಗಿದೆ.
ಕ್ರಿಕೆಟ್ ಕ್ಷೇತ್ರದ ಗಣ್ಯರಷ್ಟೇ ಅಲ್ಲದೆ ಬಾಲಿವುಡ್ ಕ್ಷೇತ್ರದ ಹಲವಾರು ಕಲಾವಿದರು ಕೂಡ ಈ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರೆಂದು ಹೇಳಲಾಗುತ್ತಿದೆ. ನಟ ಅಭಿಷೇಕ್ ಬಚನ್ ತಮ್ಮ ಪತ್ನಿ ಐಶ್ವರ್ಯ ರೈ ಬಚನ್ ಅವರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಜೊತೆಗೆ ಬಾಲಿವುಡ್‌ನ ಕಿಂಗ್ ಖಾನ್ ಎಂದೇ ಪ್ರಸಿದ್ಧರಾದ ಶಾರುಕ್ ಖಾನ್ ಕೂಡ ತಮ್ಮ ಕುಟುಂಬದೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೆಂದು ಹೇಳಲಾಗುತ್ತಿದೆ.
ಸಾನಿಯಾ ಚಂದೋಕ್ ಯಾರು?
ಅರ್ಜುನ್ ತೆಂಡೂಲ್ಕರ್ ಅವರ ಪತ್ನಿ ಸಾನಿಯಾ ಚಂದೋಕ್ ಪ್ರಮುಖ ಕೈಗಾರಿಕಾ ಕುಟುಂಬಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ಅವರು ಪ್ರಸಿದ್ಧ ಉದ್ಯಮಿಯ ಕುಟುಂಬದ ಸದಸ್ಯೆಯಾಗಿದ್ದು, ಮುಂಬೈನಲ್ಲಿ ಹಲವು ವರ್ಷಗಳಿಂದ ಆಹಾರ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಕುಟುಂಬದ ಹಿನ್ನೆಲೆಯನ್ನು ಹೊಂದಿದ್ದಾರೆ ಎನ್ನಲಾಗುತ್ತಿದೆ.
ಸಾನಿಯಾ ಚಂದೋಕ್ ಅವರು ಲಂಡನ್‌ನ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಲಂಡನ್ ಸ್ಕೂಲ್ ಆಫ್ ಎಕಮಾಮಿಕ್ಸ್ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿದೇಶದಲ್ಲಿ ಶಿಕ್ಷಣ ಪಡೆದು ಭಾರತಕ್ಕೆ ಮರಳಿದ ನಂತರ ಅವರು ತಮ್ಮ ಕುಟುಂಬದ ವ್ಯವಹಾರಗಳಲ್ಲಿ ಭಾಗಿಯಾಗುತ್ತಿರುವುದಾಗಿ ತಿಳಿದುಬಂದಿದೆ.
ಇದರ ಜೊತೆಗೆ ಸಾನಿಯಾ ಪಶುವೈದ್ಯಕೀಯ ಕ್ಷೇತ್ರದಲ್ಲೂ ಆಸಕ್ತಿ ಹೊಂದಿದ್ದಾರೆ. ಮುಂಬೈನಲ್ಲಿ ಐಷಾರಾಮಿ ಸಾಕುಪ್ರಾಣಿಗಳ ಆರೈಕೆ ಕೇಂದ್ರ (ಪೆಟ್ ಸ್ಪಾ) ಅನ್ನು ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಕುಪ್ರಾಣಿಗಳ ಆರೈಕೆ, ಚಿಕಿತ್ಸೆ ಮತ್ತು ವಿಶೇಷ ಸೇವೆಗಳನ್ನು ನೀಡುವ ಈ ಕೇಂದ್ರವು ಮುಂಬೈನಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿದೆ ಎಂದು ವರದಿಗಳು ಹೇಳುತ್ತವೆ.
ಅರ್ಜುನ್ ತೆಂಡೂಲ್ಕರ್ ಅವರ ಕ್ರಿಕೆಟ್ ಪಯಣ
ಅರ್ಜುನ್ ತೆಂಡೊಲ್ಕರ್ ಬಾಲ್ಯದಿಂದಲೇ ಕ್ರಿಕೆಟ್ ವಾತಾವರಣದಲ್ಲಿ ಬೆಳೆದವರು. ತಮ್ಮ ತಂದೆ ಸಚಿನ್ ತೆಂಡ್ಕೋಲರ್ ವಿಶ್ವ ಕ್ರಿಕೆಟ್‌ನ ಮಹಾನ್ ಆಟಗಾರರಾಗಿದ್ದ ಕಾರಣದಿಂದ ಅರ್ಜುನ್ ಮೇಲೂ ಅಭಿಮಾನಿಗಳ ನಿರೀಕ್ಷೆ ಹೆಚ್ಚಿನದು.

ಅರ್ಜುನ್ ಎಡಗೈ ವೇಗದ ಬೌಲರ್ ಆಗಿ ಕ್ರಿಕೆಟ್ ಲೋಕದಲ್ಲಿ ತಮ್ಮದೇ ಗುರುತು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಜೊತೆಗೆ ಅವರು ಬ್ಯಾಟಿಂಗ್ ಕೂಡ ಮಾಡಬಲ್ಲ ಆಲ್‌ರೌಂಡರ್ ಆಗಿ ಬೆಳೆಯುತ್ತಿದ್ದಾರೆ.
2021ರಲ್ಲಿ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜಿನಲ್ಲಿ ಆಯ್ಕೆಯಾಗುವ ಮೂಲಕ ದೊಡ್ಡ ಮಟ್ಟದಲ್ಲಿ ಗಮನ ಸೆಳೆದಿದ್ದರು. ಆರಂಭದಲ್ಲಿ ಅವರನ್ನು ಮುಂಬೈ ಇಂಡಿಯನ್ಸ್ ತಂಡವು 20 ಲಕ್ಷ ರೂಪಾಯಿಗೆ ಖರೀದಿಸಿತ್ತು. ನಂತರದ ಸೀಸನ್‌ಗಳಲ್ಲಿ ಕೂಡ ಮುಂಬೈ ಇಂಡಿಯನ್ಸ್ ತಂಡವೇ ಅವರನ್ನು ಉಳಿಸಿಕೊಂಡಿತ್ತು.
2023ರಲ್ಲಿ ನಡೆದ ಹರಾಜಿನಲ್ಲಿ ಅವರ ಬೆಲೆ ಸುಮಾರು 30 ಲಕ್ಷ ರೂಪಾಯಿಗೆ ಏರಿಕೆಯಾಯಿತು. ನಂತರದ ಹರಾಜುಗಳಲ್ಲಿ ಇತರ ತಂಡಗಳೂ ಅವರ ಮೇಲೆ ಆಸಕ್ತಿ ತೋರಿದ್ದರೆಂದು ಹೇಳಲಾಗುತ್ತಿದೆ.
ಐಪಿಎಲ್‌ನಲ್ಲಿ ತಂಡದಲ್ಲಿದ್ದರೂ ಅವರಿಗೆ ಹೆಚ್ಚಿನ ಪಂದ್ಯಗಳಲ್ಲಿ ಅವಕಾಶ ಸಿಕ್ಕಿಲ್ಲ. ಇದುವರೆಗೆ ಅವರು ಕೆಲವೇ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದಾರೆ. ಆದರೆ ಅವರು ಪ್ರದರ್ಶಿಸಿದ ಬೌಲಿಂಗ್ ಸಾಮರ್ಥ್ಯದಿಂದ ಅಭಿಮಾನಿಗಳ ಗಮನ ಸೆಳೆದಿದ್ದಾರೆ.
ಐಪಿಎಲ್ ಜೊತೆಗೆ ಅವರು ದೇಶೀಯ ಕ್ರಿಕೆಟ್‌ನಲ್ಲೂ ಆಡುತ್ತಿದ್ದಾರೆ. ಭಾರತದ ಪ್ರಮುಖ ದೇಶೀಯ ಟೂರ್ನಿಗಳಾದ ರಣಜಿ ಟ್ರೋಫಿ ವಿಜಯ್ ಹಜಾರೆ ಟ್ರೋಫಿ ಮತ್ತು Syed ಮುಸ್ತಕ್ ಹಾಲಿ ಟ್ರೋಫಿ ಪಂದ್ಯಾವಳಿಗಳಲ್ಲಿ ತಮ್ಮ ತಂಡವನ್ನು ಪ್ರತಿನಿಧಿಸಿದ್ದಾರೆ.
ಈ ಟೂರ್ನಿಗಳಲ್ಲಿ ಆಡುವುದರಿಂದ ಅವರಿಗೆ ಉತ್ತಮ ಅನುಭವ ದೊರೆಯುತ್ತಿದ್ದು, ಭವಿಷ್ಯದಲ್ಲಿ ಭಾರತೀಯ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗುವ ಗುರಿಯನ್ನು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಅರ್ಜುನ್ ತೆಂಡೂಲ್ಕರ್ ಆಸ್ತಿ ಮತ್ತು ವೈಯಕ್ತಿಕ ಜೀವನ
ಅರ್ಜುನ್ ತೆಂಡೂಲ್ಕರ್ ಅವರು ಕ್ರಿಕೆಟ್ ವೃತ್ತಿಜೀವನದ ಮೂಲಕ ಐಪಿಎಲ್ ಸೇರಿದಂತೆ ವಿವಿಧ ಟೂರ್ನಿಗಳಿಂದ ಆದಾಯ ಗಳಿಸಿದ್ದಾರೆ. ವರದಿಗಳ ಪ್ರಕಾರ, ಐಪಿಎಲ್ ಮೂಲಕ ಮಾತ್ರವೇ ಅವರು ಸುಮಾರು 1.40 ಕೋಟಿ ರೂಪಾಯಿಗೂ ಹೆಚ್ಚು ಹಣ ಗಳಿಸಿದ್ದಾರೆ ಎನ್ನಲಾಗಿದೆ.
ಇದರ ಜೊತೆಗೆ ದೇಶೀಯ ಕ್ರಿಕೆಟ್ ಟೂರ್ನಿಗಳಿಂದಲೂ ಅವರಿಗೆ ವಾರ್ಷಿಕ ಆದಾಯ ದೊರೆಯುತ್ತದೆ ಎಂದು ಹೇಳಲಾಗುತ್ತಿದೆ.
ಅವರ ಕುಟುಂಬದ ಆಸ್ತಿ ಮತ್ತು ವೈಯಕ್ತಿಕ ಆದಾಯವನ್ನು ಸೇರಿಸಿ ನೋಡಿದರೆ ಸುಮಾರು 22 ಕೋಟಿ ರೂಪಾಯಿ ಮೌಲ್ಯದ ಸಂಪತ್ತನ್ನು ಹೊಂದಿದ್ದಾರೆ ಎಂಬ ಅಂದಾಜು ವರದಿಗಳಲ್ಲಿ ಪ್ರಕಟವಾಗಿದೆ.
ಪ್ರಸ್ತುತ ಅರ್ಜುನ್ ತೆಂಡೂಲ್ಕರ್ ತಮ್ಮ ಕುಟುಂಬ ಸದಸ್ಯರೊಂದಿಗೆ ಮುಂಬೈನಲ್ಲಿ ವಾಸಿಸುತ್ತಿದ್ದಾರೆ. ಕ್ರಿಕೆಟ್ ವೃತ್ತಿಜೀವನವನ್ನು ಮುಂದುವರೆಸುವ ಜೊತೆಗೆ ವೈಯಕ್ತಿಕ ಜೀವನದಲ್ಲೂ ಹೊಸ ಹಂತಕ್ಕೆ ಕಾಲಿಟ್ಟಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ.

ಇದರ ಮಧ್ಯೆ ಈ ಮದುವೆಯ ಕುರಿತು ಅಧಿಕೃತ ಘೋಷಣೆ ಹೊರಬರುವುದನ್ನು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ನವಜೋಡಿಗೆ ಶುಭಾಶಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ಕ್ರಿಕೆಟ್ ದಿಗ್ಗಜನ ಮಗನಾಗಿ ಕ್ರಿಕೆಟ್ ಲೋಕಕ್ಕೆ ಪ್ರವೇಶಿಸಿದ ಅರ್ಜುನ್ ತೆಂಡೂಲ್ಕರ್ ಈಗ ತಮ್ಮ ವೃತ್ತಿಜೀವನವನ್ನು ಮತ್ತಷ್ಟು ಬಲಪಡಿಸಲು ಮತ್ತು ಹೊಸ ಸಾಧನೆಗಳನ್ನು ಮಾಡಬೇಕೆಂಬ ಕನಸಿನೊಂದಿಗೆ ಮುಂದುವರಿಯುತ್ತಿದ್ದಾರೆ. ಅವರ ವೈಯಕ್ತಿಕ ಜೀವನದ ಈ ಹೊಸ ಅಧ್ಯಾಯವು ಅವರ ಜೀವನಕ್ಕೆ ಮತ್ತಷ್ಟು ಸಂತೋಷ ಮತ್ತು ಯಶಸ್ಸು ತರಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.





