HOMENews

ಅಂತರ ಕಾಲೇಜು ಸಾಫ್ಟ್‌ಬಾಲ್ ಪಂದ್ಯಾವಳಿ: ಮಹಾಜನ ಪ್ರಥಮ ದರ್ಜೆ ಕಾಲೇಜಿಗೆ ಪ್ರಥಮ ಸ್ಥಾನ

ಮೈಸೂರು: ಅಂತರ ಕಾಲೇಜು ಪುರುಷರ ಚಾಮರಾಜ ವಲಯ ಸಾಫ್ಟ್‌ಬಾಲ್ ಪಂದ್ಯಾವಳಿಯಲ್ಲಿ  ಮೈಸೂರಿನ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜು ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದೆ.

ನಗರದ ಎಸ್‌ಬಿಆರ್‌ಆರ್  ಮಹಾಜನ ಪ್ರಥಮ ದರ್ಜೆ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ಈ ಚಾಮರಾಜ ವಲಯ ಮಟ್ಟದ ಅಂತರ ಕಾಲೇಜು ಪುರುಷರ ಸಾಫ್ಟ್‌ಬಾಲ್ ಪಂದ್ಯಾವಳಿಯಲ್ಲಿ ವಿವಿಧ ಕಾಲೇಜುಗಳ ತಂಡಗಳು ಭಾಗವಹಿಸಿದ್ದವು. ಕ್ರೀಡಾಸ್ಪರ್ಧೆಯಲ್ಲಿ ಮಹಾಜನ ಪ್ರಥಮ ದರ್ಜೆ ಕಾಲೇಜಿನ ತಂಡವು ಉತ್ತಮ ಕೌಶಲ್ಯ ಮತ್ತು ಸಮನ್ವಯತೆಯ ಆಟ ಪ್ರದರ್ಶಿಸಿ ಎದುರಾಳಿಗಳನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿತು.

ತಂಡದ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ದೈಹಿಕ ಶಿಕ್ಷಣ ವಿಭಾಗದವರು ಅಭಿನಂದನೆ ಸಲ್ಲಿಸಿದರು. ವಿದ್ಯಾರ್ಥಿಗಳು ಕ್ರೀಡೆ ಹಾಗೂ ವಿದ್ಯಾಭ್ಯಾಸ ಎರಡರಲ್ಲೂ ಸಾಧನೆ ಮಾಡುತ್ತಿರುವುದು ಕಾಲೇಜಿನ ಹೆಮ್ಮೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂಶುಪಾಲರಾದ ಡಾ. ಬಿ.ಆರ್. ಜಯಕುಮಾರಿ, ವಿದ್ಯಾರ್ಥಿಗಳು ಕ್ರೀಡಾಕ್ಷೇತ್ರದಲ್ಲೂ ಉತ್ತಮ ಸಾಧನೆ ತೋರಿಸುತ್ತಿರುವುದು ಸಂತಸದ ವಿಷಯವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಶುಭಾಶಯ ಕೋರಿದರು.

ದೈಹಿಕ ಶಿಕ್ಷಣ ನಿರ್ದೇಶಕರಾದ ಪಿ.ಎಸ್. ಮಧುಸೂಧನ ಹಾಗೂ ಡಾ. ಹೆಚ್.ಎನ್. ಭಾಸ್ಕರ್ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ತಂಡವನ್ನು ತರಬೇತಿ ನೀಡಿದ್ದರು. ಅವರ ಮಾರ್ಗದರ್ಶನ ಮತ್ತು ವಿದ್ಯಾರ್ಥಿಗಳ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಕಾಲೇಜು ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

ಛಾಯಾಚಿತ್ರದಲ್ಲಿ (ಎಡದಿಂದ ಬಲಕ್ಕೆ ಕುಳಿತಿರುವವರು): ದೈಹಿಕ ಶಿಕ್ಷಣ ನಿರ್ದೇಶಕರಾದ ಪಿ.ಎಸ್. ಮಧುಸೂಧನ, ಪ್ರಾಂಶುಪಾಲರಾದ ಡಾ. ಬಿ.ಆರ್. ಜಯಕುಮಾರಿ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಹೆಚ್.ಎನ್. ಭಾಸ್ಕರ್ ಹಾಗೂ ತಂಡದ ನಾಯಕ ಅಭಿಷೇಕ್ ಅವರನ್ನು ಕಾಣಬಹುದು.

ಛಾಯಾಚಿತ್ರದಲ್ಲಿ (ಎಡದಿಂದ ಬಲಕ್ಕೆ ನಿಂತಿರುವವರು): ಸೋಮಶೇಖರ ಕೆ., ನಂದನ್, ಅಖಿಲೇಶ್ ಗೌಡ, ಪುನೀತ್, ಮಹೇಂದ್ರ, ಆದಿತ್ಯ, ವಿಶ್ವಾಸ್, ಮಧನ್, ಶ್ರೀಕಾಂತ್, ಶಶಾಂಕ್, ಆರ್ಯನ್, ಭುವನೇಶ್ ಹಾಗೂ ಉಲ್ಲಾಸ್ ತಂಡದ ಆಟಗಾರರು ಉಪಸ್ಥಿತರಿದ್ದಾರೆ

Leave a Reply