HOMENews

ಐಪಿಎಲ್ ಪಂದ್ಯಕ್ಕೆ 2026 ವೇಳಾಪಟ್ಟಿ ಬಿಡುಗಡೆ

ಮುಂಬೈ, ಮಾ.12: ವಿಶ್ವದ ಅತ್ಯಂತ ಜನಪ್ರಿಯ ಕ್ರಿಕೆಟ್ ಟೂರ್ನಿಗಳಲ್ಲೊಂದು ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 19ನೇ ಆವೃತ್ತಿಯ ವೇಳಾಪಟ್ಟಿಯ ಮೊದಲ ಹಂತವನ್ನು ಬಿಡುಗಡೆ ಮಾಡಲಾಗಿದೆ. 2026ರ ಐಪಿಎಲ್ ಟೂರ್ನಿ ಮಾರ್ಚ್ 28ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯವೇ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಟೂರ್ನಿಯ ಉದ್ಘಾಟನಾ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಸನ್ ರೈಸರ್ಸ್ ಹೈದರಬಾದ್ (ಎಸ್ಆರ್‌ಎಚ್) ತಂಡಗಳ ನಡುವೆ ನಡೆಯಲಿದೆ. ಈ ಪಂದ್ಯ ಎಂ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆಯಲಿದ್ದು, ಬೆಂಗಳೂರು ಅಭಿಮಾನಿಗಳು ಭರ್ಜರಿ ಕ್ರಿಕೆಟ್ ಹಬ್ಬಕ್ಕೆ ಸಾಕ್ಷಿಯಾಗಲಿದ್ದಾರೆ.

ಐಪಿಎಲ್ ವೇಳಾಪಟ್ಟಿ ಬಿಡುಗಡೆಗೆ ವಿಳಂಬ

ಐಪಿಎಲ್ 2026 ವೇಳಾಪಟ್ಟಿ ಬಿಡುಗಡೆ ಸ್ವಲ್ಪ ತಡವಾಗಿತ್ತು. ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗಳು ಮತ್ತು ಭದ್ರತಾ ವ್ಯವಸ್ಥೆಗಳ ಕಾರಣದಿಂದಾಗಿ ಸಂಪೂರ್ಣ ವೇಳಾಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ. ಪ್ರಸ್ತುತ ಮೊದಲ 20 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ನಮ್ಮ ಬೆಂಗಳೂರಿನಲ್ಲಿ ಎರಡು ಪ್ರಮುಖ ಪಂದ್ಯಗಳು

ಮೊದಲ ಹಂತದ ವೇಳಾಪಟ್ಟಿಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡು ಪ್ರಮುಖ ಪಂದ್ಯಗಳು ನಡೆಯಲಿವೆ.

ಮಾ.28: ಆರ್ಸಿಬಿ vs ಎಸ್ಆರ್‌ಎಚ್ (ಉದ್ಘಾಟನಾ ಪಂದ್ಯ)

ಏ.5: ಆರ್ಸಿಬಿ vs ಚನೈ ಸೂಪರ್ ಕಿಂಗ್  (ಸಿಎಸ್‌ಕೆ)

ಈ ಎರಡೂ ಪಂದ್ಯಗಳು ಅಭಿಮಾನಿಗಳಲ್ಲಿ ಭಾರಿ ಉತ್ಸಾಹ ಮೂಡಿಸುವ ಸಾಧ್ಯತೆ ಇದೆ. ವಿಶೇಷವಾಗಿ ಆರ್ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯ ಎಂದರೆ ಸದಾ ಕ್ರಿಕೆಟ್ ಪ್ರೇಮಿಗಳಿಗೆ ದೊಡ್ಡ ಹಬ್ಬವೇ ಆಗಿರುತ್ತದೆ.

ಐಪಿಎಲ್ ಬಗ್ಗೆ ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

ಪ್ರತಿ ವರ್ಷ ಐಪಿಎಲ್ ಟೂರ್ನಿ ವಿಶ್ವದ ಗಮನ ಸೆಳೆಯುತ್ತದೆ. ಭಾರತ ಸೇರಿದಂತೆ ಹಲವು ದೇಶಗಳ ಆಟಗಾರರು ಭಾಗವಹಿಸುವ ಈ ಟೂರ್ನಿ ಯುವ ಆಟಗಾರರಿಗೆ ತಮ್ಮ ಪ್ರತಿಭೆ ತೋರಿಸಲು ದೊಡ್ಡ ವೇದಿಕೆಯಾಗಿದೆ.

ಬೆಂಗಳೂರು ತಂಡ ಆರ್ಸಿಬಿಗೆ ಈ ಬಾರಿ ಅಭಿಮಾನಿಗಳ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ. ಕಳೆದ ಆವೃತ್ತಿಗಳಲ್ಲಿ ಟ್ರೋಫಿ ಕೈ ತಪ್ಪಿದ್ದರೂ ಈ ಬಾರಿ ತಂಡ ಉತ್ತಮ ಪ್ರದರ್ಶನ ನೀಡಲಿದೆ ಎಂಬ ವಿಶ್ವಾಸ ಅಭಿಮಾನಿಗಳಲ್ಲಿ ಇದೆ.

ಐಪಿಎಲ್ 2026 ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಕ್ರಿಕೆಟ್ ಅಭಿಮಾನಿಗಳು ಈಗಾಗಲೇ ಟಿಕೆಟ್ ಹಾಗೂ ಪಂದ್ಯಗಳಿಗಾಗಿ ಕಾತರದಿಂದ ಕಾಯುತ್ತಿದ್ದಾರೆ.

ಒಟ್ಟಿನಲ್ಲಿ, ಮಾರ್ಚ್ 28ರಿಂದ ಆರಂಭವಾಗಲಿರುವ ಐಪಿಎಲ್ 2026 ಟೂರ್ನಿ ಮತ್ತೆ ಕ್ರಿಕೆಟ್ ಹಬ್ಬದ ಸಂಭ್ರಮವನ್ನು ದೇಶದಾದ್ಯಂತ ಹರಡುವುದರಲ್ಲಿ ಅನುಮಾನವೇ ಇಲ್ಲ.

Leave a Reply