
ಬೆಂಗಳೂರು, ಮಾರ್ಚ್ 4: – ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್. ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷವಾಗಿ ತರಬೇತಿ ಆಯೋಜಿಸಿದ್ದು, ಪತ್ರಕರ್ತೆಯರಿಂದ ಅರ್ಜಿ ಆಹ್ವಾನಿಸಿದೆ.
ತರಬೇತಿಯು ಮಾರ್ಚ್ 25 ರಿಂದ 27ರ ವರೆಗೆ ಮೈಸೂರಿನ ಇನ್‌ಫೋಸಿಸ್ ಕ್ಯಾಂಪಸ್‌ನಲ್ಲಿ ನಡೆಯಲಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತೆಯರು ಅರ್ಜಿ ಸಲ್ಲಿಸಬಹುದು.
ಆಸಕ್ತ ಪತ್ರಕರ್ತೆಯರು ಗೂಗಲ್ ಫಾರ್ಮ್ https://forms.gle/tozr4GxUQibDHBvk9 ನಲ್ಲಿ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸುವ ಮೂಲಕ ತರಬೇತಿಗೆ ನೋಂದಾಯಿಸಬಹುದಾಗಿದೆ.
- ಅರ್ಜಿ ನಮೂನೆಯಲ್ಲಿ ಸೂಚಿಸಿರುವಂತೆ ಪತ್ರಕರ್ತೆಯರು ಭಾವಚಿತ್ರ, ವಯಸ್ಸಿನ ದಾಖಲೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಅಥವಾ ಕಚೇರಿಯ ಅಧಿಕೃತ ಗುರುತಿನಚೀಟಿ, ಸದರಿ ಮಾಧ್ಯಮ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಕುರಿತ ದಾಖಲೆ ಹಾಗೂ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ಕುರಿತು ಸೇವಾನುಭವ ದಾಖಲೆಗಳನ್ನು ಸಲ್ಲಿಸಬೇಕು.
- ಇದು ಮೂರು ದಿನಗಳ ವಸತಿಯುತ ತರಬೇತಿಯಾಗಿದ್ದು, ಪತ್ರಕರ್ತೆಯರಿಗೆ ನಿಯಮಾನುಸಾರ ಪ್ರಯಾಣ ಭತ್ಯೆ ನೀಡಲಾಗುವುದು.
- ಈ ತರಬೇತಿ ಕಾರ್ಯಕ್ರಮದಲ್ಲಿ ಡಿಜಿಟಲ್ ಮಾಧ್ಯಮ, ಎಐ ಬಳಕೆ ಹಾಗೂ ಸಾಫ್ಟ್‌ಸ್ಕಿಲ್ ಅಭಿವೃದ್ಧಿ ಮತ್ತು ನಾಯಕತ್ವ ತರಬೇತಿ ನೀಡಲಾಗುವುದು.
- ಪತ್ರಕರ್ತೆಯರ ಆಯ್ಕೆ ಕುರಿತ ಅಂತಿಮ ನಿರ್ಧಾರ ಅಕಾಡೆಮಿಯದ್ದೇ ಆಗಿರುತ್ತದೆ.
ಅರ್ಜಿ ಸಲ್ಲಿಸಲು ಮಾರ್ಚ್ 10, 2026 ಕೊನೆಯ ದಿನವಾಗಿದೆ.
Karnataka Media Academy Invites Applications for Training Program for Women Journalists under Infosys Springboard
Bengaluru, March 4:- The Karnataka Media Academy, under the Infosys Springboard CSR initiative, has organized a special training program exclusively for women journalists and is now inviting applications.
The training will take place from March 25 to 27 at the Infosys Campus in Mysuru.
Eligibility Criteria
- Women journalists working in media organizations listed in the Information and Public Relations Department’s media list.
- Experience: A minimum of 5 years of professional experience in the field.
How to Apply
Interested women journalists can register by providing the required information and documents via this Google Form: https://forms.gle/tozr4GxUQibDHBvk9.
Requirements & Key Details
- Documentation: As specified in the application form, candidates must submit:
o A photograph and proof of age.
o An authorization letter from the head of their current media organization or an official office ID card.
o Proof that the organization is included in the Information and Public Relations Department’s media list.
o Experience certificates/documents proving a minimum of 5 years of service.
- Logistics: This is a three-day residential training program. Traveling allowance (TA) will be provided as per regulations. Training will be held at the designated Infosys campus.
- Curriculum: The program will focus on Digital Media, the use of AI (Artificial Intelligence), Soft Skills development, and Leadership training.
- Selection: The final decision regarding the selection of journalists rests solely with the Academy.
Deadline: The last date to submit applications is March 10, 2026.





