HOMENews

ಟಿ.ನರಸೀಪುರದಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಎಂ. ಅನಿಲ್ ಕುಮಾರ್ ನೇಮಕ

ಟಿ.ನರಸೀಪುರ, ಫೆ.28: ಭಾರತೀಯ ಜನತಾ ಪಾರ್ಟಿ ಮೈಸೂರು ಗ್ರಾಮಾಂತರ ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷರಾಗಿ ಎಂ. ಅನಿಲ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್. ಸುಬ್ಬಣ್ಣ (ಕುಂಭರಹಳ್ಳಿ ಸುಬ್ಬಣ್ಣ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಎಸ್‌ಸಿ ಮೋರ್ಚಾ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಎಂ. ಅನಿಲ್ ಕುಮಾರ್ ಅವರು ನೀಡಲಾದ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆಯಿಂದ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಮತ್ತಷ್ಟು ಸದೃಢಗೊಳಿಸುವಲ್ಲಿ ಕಾರ್ಯನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂಬರುವ ದಿನಗಳಲ್ಲಿ ಎದುರಾಗುವ ವಿವಿಧ ರಾಜಕೀಯ ಹಾಗೂ ಸಂಘಟನಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಪಕ್ಷದ ವರ್ಚಸ್ಸು ಹೆಚ್ಚಿಸುವಲ್ಲಿ ಶ್ರಮಿಸುವಂತೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದೇ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಎಂ. ಅನಿಲ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿ, ಅವರ ನೇತೃತ್ವದಲ್ಲಿ ಎಸ್‌ಸಿ ಮೋರ್ಚಾ ಚಟುವಟಿಕೆಗಳು ಇನ್ನಷ್ಟು ಚುರುಕುಗೊಳ್ಳಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Reply