News

News National and International

HOMENews

ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ರೈತರಿಗೆ ಅರಿವು ಮೂಡಿಸಿ – ಡಾ ಪಿ ಶಿವರಾಜು

ಮೈಸೂರು ಮಾರ್ಚ್ 12 :-  ರೈತರಿಗೆ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಅಧಿಕ ಇಳುವರಿ ಪಡೆಯಲು ಅಪರ ಜಿಲ್ಲಾಧಿಕಾರಿ ಗಳಾದ ಡಾ ಪಿ ಶಿವರಾಜು ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 11ನೇ ಕೃಷಿ ಗಣತಿಯ ಮೂರನೇ ಹಂತದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಹಿಡುವಳಿ ದಾರರ ಸಂಖ್ಯೆ ಹೆಚ್ಚಳವಾಗಬೇಕು. ನಿಯಮಿತವಾಗಿ ಮಣ್ಣು ಪರೀಕ್ಷೆ ಮಾಡುವ ಮೂಲಕ ಯಾವ ಮಣ್ಣಿಗೆ ಯಾವ ಬೆಳೆಯನ್ನು ಬೆಳೆಯುವ ಮೂಲಕ ಹೆಚ್ಚು ಇಳುವರಿ ಪಡೆಯಬಹುದು ಎಂಬುದರ ಬಗ್ಗೆ ಅರಿವು ಮೂಡಿಸಬೇಕು. ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಪೂರೈಕೆಯಾಗಿದೆಯೇ ಎಂಬುದನ್ನು ಪರಿಶೀಲನೆ ಮಾಡಬೇಕು. ಎಲ್ಲಾ ಬೆಳೆಗಳ ವಿಸ್ತೀರ್ಣ ಹೆಚ್ಚಳವಾಗಿದೆ. ಜಿಲ್ಲೆಯ ಹಿಡುವಳಿದಾರರ ನೀರಾವರಿ ವಿಸ್ತೀರ್ಣ 3.55 % ರಷ್ಟು ಹೆಚ್ಚಳವಾಗಿದೆ. ನೀರಾವರಿ ಅಲ್ಲದ ವಿಸ್ತೀರ್ಣ 5.72 % ಕಡಿಮೆಯಾಗಿದೆ. ಹಸಿರು ಗೊಬ್ಬರದ ಸಂಸ್ಕರಿಸಿದ ಎಲ್ಲಾ ಬೆಳೆಗಳ ಒಟ್ಟು ವಿಸ್ತೀರ್ಣ ಹೆಚ್ಚಳವಾಗಿದೆ ಎಂದು ತಿಳಿಸಿದರು.

ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಬಳಕೆ ಜಿಲ್ಲೆಯಲ್ಲಿ ಹೆಚ್ಚಳವಾಗಿದೆ. ಇದು ಕಡಿಮೆ ಆಗುವಂತೆ ರೈತರಿಗೆ ಅರಿವು ಮೂಡಿಸಬೇಕು. ಹೆಚ್ಚಿನ ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕ ಬಳಕೆ ಆಗಬಾರದು. ಹೆಚ್ಚಿನ ಬಳಕೆಯಿಂದ ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತದೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ  ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಆರ್ ಚಿತ್ರಾ, ಜಿಲ್ಲಾ ಶಸ್ತ್ರಚಿಕಿತ್ಸರಾದ ಡಾ. ಸತೀಶ್ ಎನ್.ವಿ, ಮಕ್ಕಳ ಜಿಲ್ಲಾ ಮಕ್ಕಳ ಸಂತಾನೋತ್ಪತ್ತಿ ಅಧಿಕಾರಿ ಡಾ. ಮಹಮ್ಮದ್ ಸಿರಾಜ್ ಅಹಮದ್,ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ  ಸುರೇಶ್ ಅಂಗಡಿ, ಕೃಷಿ ಇಲಾಖೆಯ ಉಪ ನಿರ್ದೇಶಕ ರಾದ  ಮಂಜುನಾಥ್, ತಹಶೀಲ್ದಾರ್     ರಾಮ್ ಪ್ರಸಾದ್, ಸಹಾಯಕ ನಿರ್ದೇಶಕ ಹೊನ್ನೇಗೌಡ ಎಂ ವಿ, ಸಹಾಯಕ ಸಾಂಖ್ಯಿಕ ಅಧಿಕಾರಿಗಳಾದ ಗಣೇಶ, ಸಂಧ್ಯಾ ಎಸ್ ಹಾಗೂ ವಿವಿಧ ಇಲಾಖೆಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

1 28 29 30 31 32 63
Page 30 of 63