
ಮೈಸೂರು :- ಮೈಕ್ರೋ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಸಚಿವಾಲಯ, ಭಾರತ ಸರ್ಕಾರದ ಅಧೀನದಲ್ಲಿರುವ MDTCKVIC ಬೆಂಗಳೂರು ಹಾಗೂ ಶ್ರೀ ಗಂಗಾ ಚಾರಿಟೇಬಲ್ ಟ್ರಸ್ಟ್ (ರಿ), ಮೈಸೂರು ಇವರ ಸಹಯೋಗದಲ್ಲಿ 07 ಮಾರ್ಚ್ 2026 ರಂದು ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಉದ್ಯಮ ಆರಂಭಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಸರ್ಕಾರದಿಂದ ಲಭ್ಯವಿರುವ ವಿವಿಧ ಯೋಜನೆಗಳು, ಸಹಾಯಧನಗಳು ಮತ್ತು ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸುವುದಾಗಿತ್ತು.

ಕಾರ್ಯಕ್ರಮದಲ್ಲಿ MDTCKVIC ಬೆಂಗಳೂರು ಉಪನಿರ್ದೇಶಕರಾದ ಶ್ರೀ ಬಂಗಾರ ನಾಯಕ ವಿ, ಕಾರ್ಯನಿರ್ವಾಹಕ ತರಬೇತುದಾರರಾದ ಶ್ರೀ ಶಶಿಕಾಂತ್, ಆಲ್ ಇಂಡಿಯಾ ವುಮನ್ ಎಂಟರ್‌ಪ್ರಿನಿಯರ್ಸ್ ಅಂಡ್ ಫಾರ್ಮರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಶ್ರೀಮತಿ ದಿವ್ಯಶ್ರೀ ಎಂ, ಹಾಗೂ ಆಶ್ರಯ ಪ್ರಗತಿ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಚಂದ್ರಮ್ಮ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಬಂಗಾರ ನಾಯಕ ವಿ, ಕೇಂದ್ರ ಸರ್ಕಾರದ ವತಿಯಿಂದ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಲಭ್ಯವಿರುವ ವಿವಿಧ ಯೋಜನೆಗಳು ಹಾಗೂ ಸಹಾಯಧನಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳು ಈ ಯೋಜನೆಗಳ ಸದುಪಯೋಗ ಪಡೆದು ತಮ್ಮ ಸ್ವಂತ ಉದ್ಯಮಗಳನ್ನು ಆರಂಭಿಸಿ ಸ್ವಾವಲಂಬಿಗಳಾಗಬೇಕು ಎಂದು ಸಲಹೆ ನೀಡಿದರು.

ಶ್ರೀಮತಿ ದಿವ್ಯಶ್ರೀ ಎಂ ಮಹಿಳಾ ಕಲ್ಯಾಣ ಮತ್ತು ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಉದ್ಯಮ ಆರಂಭಿಸಲು ಧೈರ್ಯದಿಂದ ಮುಂದಾಗಬೇಕು ಎಂದು ಪ್ರೇರೇಪಿಸಿದರು. ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಬಲಿಷ್ಠರಾಗುವಂತೆ ಅವರು ಪ್ರೋತ್ಸಾಹಿಸಿದರು.
ಈ ಕಾರ್ಯಕ್ರಮವು ಭಾಗವಹಿಸಿದ ಅಭ್ಯರ್ಥಿಗಳಿಗೆ ಉದ್ಯಮ ಆರಂಭಿಸುವ ಕುರಿತು ಮಹತ್ವದ ಮಾಹಿತಿ ನೀಡಿದ್ದು, ಸರ್ಕಾರದ ಯೋಜನೆಗಳ ಸದುಪಯೋಗ ಪಡೆಯಲು ಪ್ರೇರಣೆ ನೀಡಿತು.





