HOME

ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಆರಂಭಕ್ಕೆ ತಜ್ಞರ ಸಮಿತಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು: ಎನ್. ಚಲುವರಾಯಸ್ವಾಮಿ

ಬೆಂಗಳೂರು, ಮಾರ್ಚ್, 11:-  ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿರುವ ಕೃಷಿ ಡಿಪ್ಲೋಮ ಕಾಲೇಜುಗಳನ್ನ ರದ್ದುಗೊಳಿಸಿದ್ದನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮತ್ತೆ ಡಿಪ್ಲೋಮ ಕಾಲೇಜು ಪ್ರವೇಶಾತಿಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಕೃಷಿ ಕಾಲೇ ಜು ಆರಂಭಕ್ಕೆ ತಜ್ಞರ ಸಮಿತಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ತಿಳಿಸಿದರು..

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ವಿಧಾನಸಭೆಯಲ್ಲಿಂದು ಉತ್ತರಿಸಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು, ನೂತನ ಕೃಷಿ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆಗಳನ್ನು ಪರಿಶೀಲಿಸುವ ಸಂಬಂಧ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಪರಿಣಿತ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ರಾಜ್ಯದಲ್ಲಿರುವ ಕೃಷಿ ವಿಶ್ವವಿದ್ಯಾಲಯಗಳ ಬಲವರ್ಧನೆ ಹಾಗೂ ಹೊಸ ಕೃಷಿ ಕಾಲೇಜುಗಳ ಸ್ಥಾಪನೆ ಮತ್ತು ಅವುಗಳ ಅಭಿವೃದ್ಧಿಗೆ ಅಗತ್ಯವಿರುವ ಅಂಶಗಳನ್ನು ಪರಿಶೀಲಿಸುತ್ತದೆ. ಈ ಸಮಿತಿಯ ಮುಂದೆ ಬ್ರಹ್ಮಾವರ ಕಾಲೇಜು ಸ್ಥಾಪನೆ ಕುರಿತು ಪ್ರಸ್ತಾವನೆ ಸಲ್ಲಿಸುವುದಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಯವರು ಹೇಳಿದರು..

ನೂತನ ಕೃಷಿ ಕಾಲೇಜುಗಳನ್ನು ಪ್ರಾರಂಭಿಸುವ ಮುಂಚೆ ಈಗಿರುವ ಕೃಷಿ ಕಾಲೇಜುಗಳ ಬಲಬರ್ಧನೆಗೆ ಇರುವಂತಹ ಕೊರತೆಗಳನ್ನು ಗಮನಿಸಿ, ಮೂಲಭೂತ ಸೌಕರ್ಯಗಳು, ಬೋಧಕ ಸಿಬ್ಬಂದಿಯ ಪ್ರಮಾಣ ಹಾಗೂ ಈಗಿರುವ ಕೃಷಿ ಪದವೀಧರರ ಲಭ್ಯತೆ ಮತ್ತು ಬೇಡಿಕೆ ಇವುಗಳನ್ನು ಪರಶೀಲಿಸಿ, ಇವುಗಳ ಸಮತೋಲನದ ನಂತರ ನೂತನ ಕಾಲೇಜು ಆರಂಭಿಸಬಹುದು ಎಂದು ಸಚಿವರು ತಿಳಿಸಿದರು..

ನೂತನ ಕಾಲೇಜುಗಳನ್ನು ಆರಂಭಿಸುವುದಕ್ಕೂ ಮೊದಲು ಪ್ರಸ್ತುತ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು, ಈ ಹಿನ್ನಲೆಯಲ್ಲಿ ಬ್ರಹ್ಮಾವರದ ಕೃಷಿ ಸಂಶೊಧನಾ ಕೇಂದ್ರದಲ್ಲಿರುವ 300 ಎಕರೆ ಜಾಗದಲ್ಲಿ ಹೊಸದಾಗಿ ಕೃಷಿ ಕಾಲೇಜು ಪ್ರಾರಂಭಕ್ಕೂ ಮೊದಲು ತಜ್ಞರ ಸಮಿತಿ ಒಪ್ಪಿಗೆ ಪಡೆದು, ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಕೃಷಿ ಸಚಿವರು ವಿಧಾನಸಭೆಯಲ್ಲಿ ಉತ್ತರ ನೀಡಿದರು..

Leave a Reply