HOMENews

ಮಾ.1ರಂದು ಕಲಾ ಮಂದಿರದಲ್ಲಿ ರೇಣುಕಾಚಾರ್ಯ ಜಯಂತಿ

ಮೈಸೂರು, ಫೆ.26:- ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ, ಶ್ರೀ ರೇಣುಕಾಚಾರ್ಯ ಜಯಂತೋತ್ಸವ ಸಮಿತಿ ವತಿಯಿಂದ ಮಾರ್ಚ್ 1 ರಂದು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಬೆಳಗ್ಗೆ 11:30 ಘಂಟೆಗೆ ಕರ್ನಾಟಕದ ಕಲಾಮಂದಿರದಲ್ಲಿ ಆಯೋಜಿಸಲಾಗಿರುತ್ತದೆ.

ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಕ್ಕು ಮತ್ತು ಕೈಗಾರಿಕ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿಯವರ ಘನ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪರವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದಾರೆ. ಚಾಮರಾಜ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್ ಸಿ., ಹಾಗೂ ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ. ರಮೇಶ್ ಬಂಡಿ ಸಿದ್ದೇಗೌಡ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನೀಲ್ ಬೋಸ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ಪ ಎಂ, ಮೈಸೂರು ಪೇಂಟ್ಸ್ ಮತ್ತು ವಾರ್ನಿಂಷ್ ಲಿಮಿಟೆಡ್ ಅಧ್ಯಕ್ಷರಾದ ಹೆಚ್. ಡಿ. ಗಣೇಶ್, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಸ್ವಾಮಿ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಅವರು ಆಗಮಿಸಲಿದ್ದಾರೆ.

 

Leave a Reply