HOMENews

ಪಿರಿಯಾಪಟ್ಟಣ ಕಾಂಗ್ರೆಸ್ ಹಿರಿಯ ಮುಖಂಡ ತೆಲಗಿನಕುಪ್ಪೆ ನಾಗಣ್ಣ ನಿಧನ

ವರದಿ: ರವಿಚಂದ್ರ ಬೂದಿತಿಟ್ಟು

ಪಿರಿಯಾಪಟ್ಟಣ: ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಉಪಾಧ್ಯಕ್ಷರು ಹಾಗೂ ಪಿರಿಯಾಪಟ್ಟಣ ತಾಲೂಕು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ತೆಲಗಿನಕುಪ್ಪೆ ನಾಗಣ್ಣ(73) ಅವರು ಬುಧವಾರ ಸಂಜೆ ನಿಧನರಾದರು. ಮೃತರಿಗೆ ಮೂವರು ಪುತ್ರರು ಹಾಗೂ ಓರ್ವ ಪುತ್ರಿ ಸೊಸೆಯಂದಿರು ಅಳಿಯ ಹಾಗೂ ಮೊಮ್ಮಕ್ಕಳು ಇದ್ದಾರೆ, ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಸ್ವಗ್ರಾಮ ಪಿರಿಯಾಪಟ್ಟಣ ತಾಲೂಕಿನ ತೆಲಗಿನಕುಪ್ಪೆ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ, ಪಂಚೆ ನಾಗಣ್ಣ ಎಂದೆ ಖ್ಯಾತರಾಗಿ ಜನಾನುರಾಗಿಯಾಗಿದ್ದ ಇವರ ನಿಧನಕ್ಕೆ ಸಚಿವರಾದ ಕೆ.ವೆಂಕಟೇಶ್,  ಗ್ರಾಮಾಂತರ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಡಾ.ಬಿ.ಜೆ ವಿಜಯ್ ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ನಿತಿನ್ ವೆಂಕಟೇಶ್, ಮೈಲ್ಯಾಕ್ ಅಧ್ಯಕ್ಷರಾದ ಎಚ್.ಡಿ ಗಣೇಶ್, ಮಾಜಿ ಶಾಸಕರಾದ ಕೆ.ಮಹದೇವ್, ಹೆಚ್.ಸಿ ಬಸವರಾಜು, ಮೈಮುಲ್ ಮಾಜಿ ಅಧ್ಯಕ್ಷ ಪಿ.ಎಂ ಪ್ರಸನ್ನ ಸೇರಿದಂತೆ ವಿವಿಧ ರಾಜಕೀಯ ಪಕ್ಷ ಮುಖಂಡರು ಹಾಗೂ ಪಿರಿಯಾಪಟ್ಟಣ ತಾಲೂಕು ಕಾಂಗ್ರೆಸ್ ಘಟಕ ವತಿಯಿಂದ ಸಂತಾಪ ಸೂಚಿಸಿದ್ದಾರೆ.

Leave a Reply