ಇತಿಹಾಸ ಪ್ರಸಿದ್ಧ ಶ್ರೀ ಮಸಣಿಕಮ್ಮ ದೇವಾಲಯಕ್ಕೆ ಶಿಲಾನ್ಯಾಸ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಾಲನೆ.,

ವರದಿ: ರವಿಚಂದ್ರ ಬೂದಿತಿಟ್ಟು
ಪಿರಿಯಾಪಟ್ಟಣ: ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಕ್ತಿ ದೇವತೆ ಶ್ರೀ ಮಸಣಿಕಮ್ಮ ದೇವಾಲಯ ನಿರ್ಮಾಣ, ಕುವೆಂಪು ಭವನ ನಿರ್ಮಾಣ, ಬೆಟ್ಟದಪುರ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಇಲಾಖೆಗಳ ರೂ. 419.78 ಕೋಟಿಗಳ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಲು ಏಪ್ರಿಲ್ 21 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಅನೇಕ ಸಚಿವರು ಪಿರಿಯಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಪಶುಸಂಗೋಪನೆ ಮತ್ತು ರೈಷ್ಮೆ ಖಾತೆ ಸಚಿವ ಕೆ. ವೆಂಕಟೇಶ್ ತಿಳಿಸಿದರು.
ಪಟ್ಟಣದ ಶ್ರೀ ಆದಿಚುಂಚನಗಿರಿ ಸಮುದಾಯದ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಈ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ 9.19.ಕೋಟಿ ವೆಚ್ಚದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಮಸಣಿಕಮ್ಮ ದೇವಾಲಯದ ಶಂಕುಸ್ಥಾಪನೆ, ರೂ.50 ಕೋಟಿ ವೆಚ್ಚದಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ರಸ್ತೆ ಸೇರಿದಂತೆ ಒಟ್ಟು 419.78 ಕೋಟಿ ವೆಚ್ಚದಲ್ಲಿ ವಿವಿಧ ಇಲಾಖೆಯ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ ಇದರೊಂದಿಗೆ ಕೃಷಿ, ತೋಟಗಾರಿಕೆ ಇಲಾಖೆ, ಮೀನುಗಾರಿಕೆ ಇಲಾಖೆ, ಪಶುಸಂಗೋಪನೆ ಮತ್ತು ಪಶುವೈದ್ಯ ಸೇವಾ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಬಿವೃದ್ಧಿ ನಿಗಮ, ಗ್ರಾಮೀಣ ಅಭಿವೃದ್ಧಿ ಯೋಜನೆ, ನಗರ ವಸತಿ ಯೋಜನೆ , ರೇಷ್ಮೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡದ ಜೇನುಕುರುಬ ಜನಾಂಗದ ವಸತಿ ರಹಿತ ಫಲಾನುಭವಿಗಳಿಗೆ ವಸತಿ ಯೋಜನೆ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಹಕಾರ ಇಲಾಖೆ ಹಾಗೂ ಇನ್ನೂ ವಿವಿಧ ಇಲಾಖೆಗಳ ನೂರಾರು ಜನ ಫಲಾನುಭವಿಗಳಿ ಸರ್ಕಾರಿ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುತ್ತದೆ. ಎಲ್ಲಾ ರಾಜ್ಯ ಸಚಿವರು ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಒಟ್ಟು 419.78 ವಿವಿಧ ಇಲಾಖೆಯ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.
ಆದ್ದರಿಂದ ತಾಲ್ಲೂಕಿನ ಜನತೆ ಪಕ್ಷಭೇದ ಮರೆತು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ ಕೇಂದ್ರ ಸರ್ಕಾರ ಕೈಗೊಂಡಿರುವ ಅವೈಜ್ಞಾನಿಕ ನಿರ್ಣಯದಿಂದ ತಂಬಾಕು ಬೆಳೆಗಾರರು ನಷ್ಠ ಅನುಭವಿಸಿ ಕಂಗಾಲಾಗಿದ್ದಾರೆ. ಮಾತೆತ್ತಿದರೆ ನಾವು ರೈತಪರ ಎಂದು ಹೇಳುವ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಈ ಭಾಗದ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ರೈತರ ಕೈಗೆ ಸಿಗದಂತಾಗಿದ್ದಾರೆ ಎಂದು ದೂರಿದರು.
ಈ ಸಂದರ್ಭದಲ್ಲಿ ಮೈಸೂರು ಪೇಂಟ್ಸ್ ಅಂಡ್ ವಾರ್ನಿಸ್ ನಿಗಮದ ಅಧ್ಯಕ್ಷ ಗಣೇಶ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮೈಮುಲ್ ನಿರ್ದೇಶಕ ಪ್ರಕಾಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಈಚೂರು ಲೋಕೇಶ್, ಕೆಪಿಸಿಸಿ ಸದಸ್ಯ ಅನಿಲ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು ಮುಖಂಡರಾದ ಬಿ.ಎಸ್.ರಾಮಚಂದ್ರ, ಬಿ.ಜೆ.ಬಸವರಾಜ್, ರಾಜಶೇಖರ್, ಪಿ.ಮಹದೇವ್, ಮಾನ್ಸೂನ್ ಚಂದ್ರು, ಚನ್ನಕಲ್ ಶೇಖರ್, ಸೇರಿದಂತೆ ಸಾವಿರಾರು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು





