
ಮೈಸೂರು, ಫೆ.27 :- ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಉದ್ಯೋಗದಾತರ ಸಹಯೋಗದಲ್ಲಿ ಕಾರ್ಪೊರೇಶನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಯೋಜನೆ (CSR fund) ಅಡಿಯಲ್ಲಿ ಮೈಸೂರು ಜಿಲ್ಲೆಯ ವಿಶೇಷ ಚೇತನರಿಗೆ ವಿವಿಧ ಉದ್ಯೋಗದಾತರ ಪ್ರಯೋಜಿತ 22 ಯಾಂತ್ರಿಕ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಲಾಯಿತು.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿಶೇಷ ಚೇತನರಿಗೆ ತ್ರಿಚಕ್ರವಾಹನಗಳನ್ನು ವಿತರಿಸಿ ಮಾತನಾಡಿ ಇಂಜಿನಿಯರ್ ಗಳು ಇಂತಹ ತಾಂತ್ರಿಕ ತ್ರಿಚಕ್ರ ವಾಹನಗಳ ವಿನ್ಯಾಸ ಮಾಡಿರುವುದನ್ನು ನೋಡಿ ಸಂತೋಷವಾಗುತ್ತದೆ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಮುಂದೆ ಇನ್ನು ಹೆಚ್ಚಿನ ಯೋಜನೆಗಳನ್ನು ಅನುಷ್ಠಾನಗೊಳಿಸಿ ವಿಶೇಷ ಚೇತನರನ್ನು ಮತ್ತಷ್ಟು ಮಾನಸಿಕವಾಗಿ ಬಲಿಷ್ಟರನ್ನಾಗಿ ಮಾಡಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತ್ ರೆಡ್ಡಿ, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ ಕಾರ್ಖಾನೆ, ಬಾಯ್ಲರ್ಗಳು ಕಾರ್ಖಾನೆಗಳ ಜಂಟಿ ನಿರ್ದೇಶಕರಾದ ಹೆಚ್.ಎಸ್ ನರೇಂದ್ರಬಾಬು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಉಪ ನಿರ್ದೇಶಕರಾದ ಬಿ. ಬಸವರಾಜು, ಕಾರ್ಖಾನೆÀ ಬಾಯ್ಲರ್ ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ ಉಪನಿರ್ದೇಶಕರಾದ ಎಂ.ಎಸ್ ಮಹದೇವು, ಸಹಾಯಕ ಕಾರ್ಮಿಕ ಆಯುಕ್ತರಾದ ಲಲಿತಾ ಬಾಯಿ ಎಲ್, ಕಾರ್ಮಿಕ ಅಧಿಕಾರಿಗಳಾದ ಚೇತನ್ ಕುಮಾರ್ ಅವರು ಉಪಸ್ಥಿತರಿದ್ದರು.





